ಕೊರೊನಾ ಸೋಂಕು ನಿಯಂತ್ರಿಸಲು ಕಠಿಣ ಕ್ರಮ ಅನಿವಾರ್ಯ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ನಾಳೆ ದೆಹಲಿಗೆ ಹೋಗುತ್ತಿದ್ದು ಅಲ್ಲಿ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು. ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಗೆ ಬೂಸ್ಟರ್ ಡೋಸ್ […]