ಕೋವಿಡ್ ನಿಯಂತ್ರಣಕ್ಕೆ ಕಳೆದ ಬಾರಿಯಂತೆ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ಕೊರೊನಾ ಸೋಂಕು ತಡೆಗಟ್ಟಲು ಕಳೆದ ಬಾರಿಯಂತೆ ಕಠಿಣವಾದ ಕರ್ಪ್ಯೂ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕೋವಿಡ್ ಕರ್ಫ್ಯೂ ನಿಂದ ಇದರ ನಿಯಂತ್ರಣ ಅಸಾಧ್ಯವಾಗಿದ್ದು, ಕಳೆದ ವರ್ಷದಂತೆ ಕನಿಷ್ಠ 15 ದಿನಗಳ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಮೆಡಿಸಿನ್ ಸಹಿತ ಅತೀ ಅವಶ್ಯಕ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಬೇಕು. […]