ದೀಪಾವಳಿ ಆಚರಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ: ಉಲ್ಲಂಘಿಸಿದರೆ ಕಠಿಣ ಕ್ರಮ- ಡಿಸಿ

ಉಡುಪಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ. ಸರ್ಕಾರದ ಆದೇಶದಂತೆ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಹಚ್ಚಬೇಕು. ಸುಡುಮದ್ದು ಮಾರಾಟ ಮಾಡುವ ಮಳಿಗೆಯ ಸುತ್ತಮುತ್ತ ಪ್ರತಿನಿತ್ಯ ಸ್ಯಾನಿಟೈಸೇಷನ್ ಮಾಡಬೇಕು ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಬೇಕು. […]