ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಠಿಣ ನಿಯಮ ಜಾರಿ; ಅನಗತ್ಯ ಓಡಾಡಿದರೆ ವಾಹನ ಸೀಜ್

ಮಂಗಳೂರು: ಕೋವಿಡ್ ಅಲೆ ನಿಯಂತ್ರಣಕ್ಕಾಗಿ ನಾಳೆಯಿಂದ (ಮೇ 7) ದ.ಕ‌ ಜಿಲ್ಲೆಯಾದ್ಯಂತ ದ.ಕ. ಜಿಲ್ಲಾಡಳಿತ ಕಠಿಣ ನಿಯಮ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಅದರಂತೆ ಬೆಳಿಗ್ಗೆ 6ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆಯಿತು. ಈ ಸಭೆಯಲ್ಲಿ ಕಠಿಣ ನಿಯಮ ಜಾರಿಗೊಳಿಸುವಂತೆ ಸಚಿವರು ಆದೇಶ ಹೊರಡಿಸಿದ್ದಾರೆ. […]