ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಕೋಟ್ಯಾಂತರ ರೂ. ಅವ್ಯವಹಾರದ ತನಿಖೆ ವಿಳಂಬ ಖಂಡಿಸಿ ಉಡುಪಿ ಜಿಲ್ಲಾ ರೈತ ಸಂಘದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ: ಬ್ರಹ್ಮಾವರದ ದ.ಕ.ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-2022ರ ನಡುವೆ ನಡೆದ 14 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಅವ್ಯವಹಾರದ ವಿರುದ್ಧ ಕ್ರಮಕ್ಕೆ ಪ್ರತಿ ಹಂತದಲ್ಲೂ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ವಿವಿಧ ರೈತ ಪರ ಸಂಘಟನೆಗಳು ಶನಿವಾರದಿಂದ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗೇಟಿನ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿವೆ. ಧರಣಿ ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮಾಜಿ ಶಾಸಕ, ವಿಧಾನ ಪರಿಷತ್‌ನ ಮಾಜಿ ಸಭಾಪತಿ ಪ್ರತಾಪ್‌ […]