ಮೇ 26: ಗಂಗೊಳ್ಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ನೋಟ್ಸ್ ಪುಸ್ತಕ ವಿತರಣೆ

ಗಂಗೊಳ್ಳಿ : ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಶಾಲಾ ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣಾ ಸಮಾರಂಭ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಮೇ 26ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 15: ಉಡುಪಿ ತಾಲ್ಲೂಕು ಮಣಿಪಾಲದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಸರ್ಕಾರಿ ಅಥವಾ ಅಂಗೀಕೃತ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನಿಲಯದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ಶೇ.75% ಅಲ್ಪಸಂಖ್ಯಾತ ಮತ್ತು ಶೇ.25% ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ವಿದ್ಯಾರ್ಥಿಯು […]