ಕುಂದಾಪುರ: ಮಂಗಳೂರು ವಿವಿಯಿಂದ ಅನುಭವಿಸುತ್ತಿರುವ ಸಮಸ್ಯೆ ವಿರುದ್ದ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಯ ಬಗ್ಗೆ ಡಿ.15 ರಂದು ಎಬಿವಿಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಕುಂದಾಪುರದ ಶಾಸ್ತ್ರಿ ವೃತ್ತದಿಂದ ಮಿನಿವಿಧಾನಸೌಧದ ತನಕ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಸಂಪರ್ಕ ಪ್ರಮುಖ್ ರಾಹುಲ್ ಶೆಟ್ಟಿ , ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದ ಹಿನ್ನೆಲೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಸಮಸ್ಯೆಯಾಗುತ್ತಿದೆ. ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದೇ […]
ಬದಲಾದ ಸನ್ನಿವೇಶದಲ್ಲಿ ವಿದ್ಯಾರ್ಥಿಗಳ ಮನಸ್ಥಿತಿಗೆ ಅನುಗುಣವಾಗಿ ಶಿಕ್ಷಕರು ಮತ್ತು ಹೆತ್ತವರು ಬದಲಾಗಬೇಕು- ಡಾ. ನಿಕೇತನ
ಉದ್ಯಾವರ: ಇಂದಿನ ಆಧುನಿಕ ಕಾಲದಲ್ಲಿ ಮಕ್ಕಳ ಮನಸ್ಥಿತಿ ಬದಲಾಗಿದೆ. ಅದರಲ್ಲೂ ಕೋವಿಡ್ – 19 ರಿಂದಾಗಿ ಮಕ್ಕಳು ತಂತ್ರಜ್ಞಾನಕ್ಕೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಜಗತ್ತೇ ಒಂದು ಹಳ್ಳಿಯಾಗಿರುವ ಜಾಗತೀಕರಣದ ಸಂದರ್ಭದಲ್ಲಿ ಮಕ್ಕಳ ಮನಸ್ಥಿತಿಯು ಅದಕ್ಕೆ ಅನುಗುಣವಾಗಿ ಬೆಳೆಯುತ್ತಿದೆ. ಈ ಸನ್ನಿವೇಶದಲ್ಲಿ ಶಿಕ್ಷಕರು ಮತ್ತು ಹೆತ್ತವರು ಕೂಡಾ ತಮ್ಮ ಮನೋಭಾವವನ್ನು ನವೀಕರಿಸಿಕೊಳ್ಳ ಬೇಕಾಗಿದೆ. ಇಲ್ಲವಾದಲ್ಲಿ ಮಕ್ಕಳ ಮನಸ್ಥಿತಿಯೊಂದಿಗೆ ಶಿಕ್ಷಕರ ಮನಸ್ಥಿತಿ ಘರ್ಷಿಸುವ ಹಂತ ತಲುಪಿದರೆ ಇದು ಮಕ್ಕಳ ಮನಸ್ಥಿತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿ ಅವರ ಶಿಕ್ಷಣ ಕುಂಠಿತವಾಗುವ ಅಪಾಯವಿದೆ […]
ವಿದ್ಯಾರ್ಥಿಗಳ ಬಸ್ ಪಾಸ್: ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ
ಉಡುಪಿ: ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೇರಣಾ ಶಿಬಿರ
ಕುಂದಾಪುರ: ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಮೇ 13 ಶುಕ್ರವಾರದಂದು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರೇರಣಾ ಶಿಬಿರದಲ್ಲಿ ಕುಂದಾಪುರ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಕೋಟೇಶ್ವರ ಇಲ್ಲಿನ ವೈದ್ಯರುಗಳಾದ ಡಾ. ಅಕ್ಷತಾ ಹಾಗೂ ಡಾ. ವಾಣಿಶ್ರೀ ಐತಾಳ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ಏಕಾಗ್ರತೆಯನ್ನು ಸಾಧಿಸುವ ಮಾರ್ಗಗಳು ಹಾಗೂ ಇಂದಿನ ವೈಜ್ಞಾನಿಕ ಕಂಪ್ಯೂಟರ್ ಯುಗದ ಧಾವಂತದ ಬದುಕಿನಲ್ಲಿ ವಿದ್ಯಾರ್ಥಿಗಳು ಮೊಬೈಲ್, ಇಂಟರ್ ನೆಟ್ ನ ಅತಿಯಾದ ಬಳಕೆಯಿಂದ ದೂರ ಇರುವುದರ ಮೂಲಕ ಭವ್ಯ ಭವಿಷ್ಯ ರೂಪಿಸಿಕೊಳ್ಳುವುದು ಹೇಗೆ ಎನ್ನುವುದರ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ಅಶೋಕ್ ಕಾರ್ಯಕ್ರಮ ನಿರೂಪಿಸಿದರು.
ಅಧ್ಯಯನ ಪ್ರವಾಸ ವೆಚ್ಚಕ್ಕೆ ಸಹಾಯಧನ
ಉಡುಪಿ, ಜೂನ್ 14: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಡಿ.ಎಡ್, ಬಿ.ಎಡ್ ಮತ್ತು ಎಲ್.ಎಲ್.ಬಿ ಮೊದಲಾದ ತಾಂತ್ರಿಕ ಮತ್ತು ವೃತ್ತಿಪರ ವಿಷಯಗಳಲ್ಲಿ ಪ್ರವಾಸವು ಕಡ್ಡಾಯವಾಗಿದ್ದರೆ ಅಂತಹ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು 1000 ರೂ. ಸಹಾಯಧನವನ್ನು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ನೀಡಲಾಗುವುದು. ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿ 18000 ರೂ. ಒಳಗಿರಬೇಕು. ಅರ್ಹ ಫಲಾನುಭವಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ, […]