ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತತೆ ಪದ ಅಳಿಸಲು ಸುಬ್ರಮಣಿಯನ್ ಸ್ವಾಮಿ ಅರ್ಜಿ: ಸೆ.23 ರಂದು ಸುಪ್ರೀಂ ಕೋರ್ಟ್ ವಿಚಾರಣೆ
ನವದೆಹಲಿ: ಸಂವಿಧಾನದ ಪೀಠಿಕೆಯಿಂದ “ಸಮಾಜವಾದ” ಮತ್ತು “ಜಾತ್ಯತೀತತೆ” ಪದಗಳನ್ನು ಅಳಿಸಲು ಕೋರಿ ರಾಜ್ಯಸಭಾ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ರಿಟ್ ಅರ್ಜಿಯು ಶುಕ್ರವಾರದಂದು ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣನೆಗೆ ಬಂದಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 23 ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಪಟ್ಟಿ ಮಾಡಲಾದ ಇದೇ ರೀತಿಯ ಅರ್ಜಿಯೊಂದಿಗೆ ಡಾ.ಸ್ವಾಮಿ ಅವರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ವಕೀಲ ಸತ್ಯ ಸಬರ್ವಾಲ್ ಪ್ರಕರಣದ ಎರಡನೇ ಅರ್ಜಿದಾರರಾಗಿದ್ದಾರೆ. 1976 […]