ರಾಹುಲ್ ಗಾಂಧಿಯ ಹೊಸ ಪಾಸ್ ಪೋರ್ಟ್ ಮನವಿಗೆ ವಿರೋಧ ವ್ಯಕ್ತಪಡಿಸಿದ ಸುಬ್ರಮಣ್ಯನ್ ಸ್ವಾಮಿ
ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್ ನೀಡುವಂತೆ ದೆಹಲಿ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಮನವಿಯನ್ನು ವಿರೋಧಿಸಿದ್ದಾರೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ಗಾಂಧಿ ಪರ ವಕೀಲ ತರನ್ನುಮ್ ಚೀಮಾ ಅವರು ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ರಾಹುಲ್ ಗಾಂಧಿಗೆ ಜಾಮೀನು ನೀಡುವ ಆದೇಶದಲ್ಲಿ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ ಎಂದು ಕೋರ್ಟ್ ಗಮನಿಸಿದೆ. […]