ಪ್ರವಾಹದ ಸಂತ್ರಸ್ತರ ನೆರವಿಗಾಗಿ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 1 ಕೋಟಿ

ಮಂಗಳೂರು:   ಕರ್ನಾಟಕದಲ್ಲಾದ ಪ್ರವಾಹದ ಹಿನ್ನೆಲೆಯಲ್ಲಿ ಸಂತ್ರಸ್ತರ ನೆರವಿಗಾಗಿ ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 1 ಕೋಟಿ ರೂ. ಪರಿಹಾರ ನೀಡಲು ನಿರ್ಧರಿಸಿದೆ. ದೇವಸ್ಥಾನದ ನಿಧಿಯಿಂದ 1 ಕೋಟಿ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ಸೇರಿದ ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಬರುತ್ತಿದ್ದ ಬಯಲು ಸೀಮೆಯ ಭಕ್ತರು ಪ್ರವಾಹದಿಂದ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದು, 1 ಕೋಟಿ ಹಣವನ್ನು […]