ಕುಕ್ಕೆ ಸುಬ್ರಹ್ಮಣ್ಯ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹೊಸ ವೇಳಾಪಟ್ಟಿಯನ್ನು ಜಾರಿಗೆ ತಂದಿದ್ದು, ಭಕ್ತರಿಗೆ ಇದೀಗ ಪ್ರತಿದಿನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ದೊರೆಯಲಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಹೊಸ ನಿರ್ಧಾರದಂತೆ ಇದೀಗ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಭಕ್ತರಿಗೆ ಹೆಚ್ಚುವರಿ ದರ್ಶನ ಸೌಲಭ್ಯ […]