ಫೆ. 1ರಿಂದ ಕುಮಾರಪರ್ವತ ಚಾರಣಕ್ಕೆ ನಿಷೇಧ: ನೀರಿನ ಕೊರತೆ ಹಿನ್ನೆಲೆ ಅರಣ್ಯ ಇಲಾಖೆ ನಿರ್ಧಾರ
ಸುಬ್ರಹ್ಮಣ್ಯ: ಚಾರಣಿಗರ ಅತಿ ನೆಚ್ಚಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕುಮಾರಪರ್ವತ ಚಾರಣವನ್ನು ಫೆ. 1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುಗತಿಯಲ್ಲಿದ್ದು ಈ ಬಾರಿ ಮಳೆ ಕೊರತೆಯಿಂದ ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗಿರ್ವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ […]
ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಗಳ ತೆರವು: ನವೆಂಬರ್ 7 ರಂದು ಸಾರ್ವಜನಿಕ ಅಹವಾಲು ಸಭೆ
ಉಡುಪಿ: ಬೆಳ್ತಂಗಡಿ ತಾಲೂಕು ಸುಬ್ರಹ್ಮಣ್ಯ ರಸ್ತೆ ರಾಜ್ಯ ಹೆದ್ದಾರಿ 17 ರ ಗುರುವಾಯನಕೆರೆ ಶಕ್ತಿನಗರದಿಂದ ಪಿಲ್ಯ ವರೆಗೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 314 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ನವೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಅಳದಂಗಡಿ ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ […]