ಸಹಾಯಧನ: ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ

ಉಡುಪಿ, ಫೆ.23: ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ಪಿ.ಎಂ ಕಿಸಾನ್ ಕರ್ನಾಟಕ ಯೋಜನೆಯ ಆರ್ಥಿಕ ಸಹಾಯಧನವು ಜಿಲ್ಲೆಯ 2257 ಮಂದಿ ರೈತರಿಗೆ ಹಾಗೂ 1067 ಮಂದಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್ ಶಿಪ್ ಸಹಾಯಧನವು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಬಾಕಿಯಿರುವುದರಿಂದ ವರ್ಗಾವಣೆಯಾಗಿರುವುದಿಲ್ಲ. ರೈತರು ಹಾಗೂ ವಿದ್ಯಾರ್ಥಿಗಳ ಪಟ್ಟಿಯನ್ನು ಕೃಷಿ ಇಲಾಖೆಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ರೈತರು […]