ಅಡುಗೆ ಅನಿಲ ಸಿಲಿಂಡರ್ ಗೆ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತ: ಸೆ. 1ರಿಂದಲೇ ನಿಯಮ ಜಾರಿ
ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಹಾಗೂ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿನ ಸತತ ಏರಿಳಿಕೆಯ ಹಿನ್ನೆಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಗೆ ಬಂದಿದೆ. ಇನ್ಮುಂದೆ ಸಬ್ಸಿಡಿ ರಹಿತ ಮತ್ತು ಸಬ್ಸಿಡಿ ಸಹಿತ ಗ್ಯಾಸ್ ಸಿಲಿಂಡರ್ಗಳ ಬೆಲೆ ಒಂದೇ ರೀತಿ ಆಗಿರುತ್ತದೆ. ಯಾವುದೇ ಗ್ರಾಹಕ ಸಿಲಿಂಡರ್ ಖರೀದಿಸಿದರೂ ಏಕರೂಪದ ಬೆಲೆ ಪಾವತಿಸಬೇಕು. ಸದ್ಯ 14.2 ಕೆಜಿ ತೂಕದ ಸಿಲಿಂಡರ್ಗೆ 594 […]