ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ: ಭಾಗೀರತಿ ಮುಳ್ಳೇರಿಯ
ಉಡುಪಿ: ಹಿರಿಯರ ತ್ಯಾಗ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ವಿಶ್ವದ ಅತೀ ದೊಡ್ಡ ಯಶಸ್ವಿ ರಾಜಕೀಯ ಪಕ್ಷವೆನಿಸಿದೆ. ರಾಜ್ಯದಿಂದ ಕಾಲ ಕಾಲಕ್ಕೆ ಬರುವ ನಿರ್ದೇಶನದಂತೆ ಪಕ್ಷದ ಸಂಘಟನಾತ್ಮಕ ವಿಚಾರಗಳನ್ನು ಮಂಡಲ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರಗಳ ಮೂಲಕ ಕಟ್ಟ ಕಡೆಯ ಕಾರ್ಯಕರ್ತರಿಗೂ ತಲುಪಿಸುವ ವ್ಯವಸ್ಥೆ ಆಗಬೇಕು. ಈ ನಿಟ್ಟಿನಲ್ಲಿ ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಿಲ್ಲಾ ಮಹಿಳಾ ಮೋರ್ಚಾದ ಪ್ರಭಾರಿ ಭಾಗೀರತಿ ಮುಳ್ಳೇರಿಯ ಹೇಳಿದರು. ಬಿಜೆಪಿ ಉಡುಪಿ ಜಿಲ್ಲಾ […]