ಸುಡಾನ್ ಸಂಘರ್ಷದ ಹಿನ್ನೆಲೆ: 20 ಲಕ್ಷ ಮಕ್ಕಳು ಸ್ಥಳಾಂತರ, ಆಹಾರ ಕ್ಷಾಮ
ಜಿನೀವಾ : ಸುಡಾನ್‌ನಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷದಿಂದಾಗಿ 20 ಲಕ್ಷಕ್ಕೂ ಅಧಿಕ ಮಕ್ಕಳು ತಮ್ಮ ಮನೆಗಳಿಂದ ಬಲವಂತವಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ ಎಂದು ಯುನಿಸೆಫ್ ತಿಳಿಸಿದೆ.ಸುಡಾನ್ನಲ್ಲಿ ಭೀಕರ ಸಶಸ್ತ್ರ ಸಂಘರ್ಷ ಮುಂದುವರೆದಿದೆ. ದೇಶದಲ್ಲಿನ ಮಕ್ಕಳ ಸ್ಥಿತಿ ತೀರಾ ಆತಂಕಕಾರಿಯಾಗಿದೆ. “ಹಿಂಸಾಚಾರದಿಂದ ದೇಶದ ವಿನಾಶ ಮುಂದುವರೆದಿದ್ದು, 1.7 ದಶಲಕ್ಷಕ್ಕೂ ಹೆಚ್ಚು ಮಕ್ಕಳು ಸುಡಾನ್ ಗಡಿ ದಾಟಿ ಹೋಗಲು ಕಾಯುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ ಮತ್ತು ಮತ್ತು 470,000 ಕ್ಕೂ ಹೆಚ್ಚು ಮಕ್ಕಳು ಈಗಾಗಲೇ ನೆರೆಯ ದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ ” ಎಂದು ಯುನಿಸೆಫ್ ಗುರುವಾರ […]
ಸುಡಾನ್ನಲ್ಲಿ ಬಿಕ್ಕಟ್ಟು ಮತ್ತಷ್ಟು ಉಲ್ಬಣ
ವಿಶ್ವಸಂಸ್ಥೆ: ಸುಡಾನ್‌ನಲ್ಲಿ ಹಿಂಸಾತ್ಮಕ ಸಂಘರ್ಷ ಮೂರನೇ ತಿಂಗಳಿಗೆ ಕಾಲಿಟ್ಟಿದ್ದು ದೇಶಾದ್ಯಂತ ಮಾನವೀಯ ಪರಿಸ್ಥಿತಿ ಹದಗೆಡುತ್ತಲೇ ಇದೆ ಎಂದು ವಿಶ್ವಸಂಸ್ಥೆಯ ಪರಿಹಾರ ವಿಭಾಗದ ಮುಖ್ಯಸ್ಥ ಮಾರ್ಟಿನ್ ಗ್ರಿಫಿತ್ಸ್ ಹೇಳಿದ್ದಾರೆ. ಸಂಘರ್ಷದಿಂದ ಜರ್ಜರಿತವಾಗಿರುವ ಸುಡಾನ್ನಲ್ಲಿ ಮಾನವೀಯ ಬಿಕ್ಕಟ್ಟು ತೀರಾ ಉಲ್ಬಣಗೊಂಡಿದೆ. ಅಗತ್ಯ ವಸ್ತುಗಳಿಗೆ ಜನ ಪರದಾಡುವಂತಾಗಿದೆ. ಮಾನವೀಯ ವ್ಯವಹಾರಗಳ ಯುಎನ್ ಅಂಡರ್‌ಸೆಕ್ರೆಟರಿ ಜನರಲ್ ಮತ್ತು ತುರ್ತು ಪರಿಹಾರ ಸಂಯೋಜಕರಾಗಿರುವ ಗ್ರಿಫಿತ್ಸ್, ಸುಡಾನ್‌ನ ಡಾರ್ಫರ್‌ನಲ್ಲಿ ಪರಿಸ್ಥಿತಿಯು ಮಾನವೀಯ ವಿಪತ್ತಿನತ್ತ ತಿರುಗುತ್ತಿದೆ ಎಂದು ಎಚ್ಚರಿಸಿದ್ದಾರೆ. ಸುಮಾರು 1.7 ಮಿಲಿಯನ್ ಜನರು ಈಗ ದೇಶದಲ್ಲಿ […]