ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತಿಗೆ ನಿರ್ಬಂಧ ಹೇರಲು ಕೇಂದ್ರ ಯೋಚನೆ: ಬೆಲೆ ಏರಿಕೆ ತಡೆಗಟ್ಟಲು ಕ್ರಮ

ನವದೆಹಲಿ: ಸಚಿವಾಲಯದ ಅಧಿಕಾರಿಗಳ ಪ್ರಕಾರ, ದೇಶೀಯ ಬೆಲೆಗಳ ಏರಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರವು ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತುಗಳನ್ನು ನಿರ್ಬಂಧಿಸಲು ಯೋಚಿಸುತ್ತಿದೆ. ವಿಶ್ವದ ಅತಿದೊಡ್ಡ ಸಕ್ಕರೆ ಉತ್ಪಾದಕ ಮತ್ತು ಬ್ರೆಜಿಲ್‌ನ ನಂತರ ಎರಡನೇ ಅತಿದೊಡ್ಡ ರಫ್ತುದಾರ ರಾಷ್ಟ್ರವಾದ ಭಾರತ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ತಡೆಗಟ್ಟಲು ಸಕ್ಕರೆ ರಫ್ತನ್ನು 10 ಮಿಲಿಯನ್ ಟನ್‌ಗಳಿಗೆ ಸೀಮಿತಗೊಳಿಸಬಹುದು ಎಂದು ಸರ್ಕಾರಿ ಮೂಲವೊಂದು ಮಂಗಳವಾರ ತಿಳಿಸಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ, […]