ಪುತ್ತಿಗೆ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ ಸಂಪನ್ನ; ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣ ಪೂಜೆಯ ದ್ವೈವಾರ್ಷಿಕ ಪರ್ಯಾಯ ನಿಟ್ಟಿ‌ಲ್ಲಿ ನಾಲ್ಕನೇ ಬಾರಿ‌ ಜ.18 ರಂದು ಸರ್ವಜ್ಞ ಪೀಠವನ್ನೇರಲಿದ್ದು, ಪರ್ಯಾಯ ಪೂರ್ವಭಾವಿ ನಾಲ್ಕನೇ ಹಾಗೂ ಕೊನೆಯದಾದ ಧಾನ್ಯ ಮುಹೂರ್ತವು ಬುಧವಾರ ನೆರವೇರಿತು. ಈಗಾಗಲೇ ಬಾಳೆ, ಅಕ್ಕಿ, ಕಟ್ಟಿಗೆ ಮುಹೂರ್ತ ಪೂರೈಸಿದ್ದು ತೀರ್ಥ ಕ್ಷೇತ್ರ ಸಂಚಾರ ಬಳಿಕ ಜ.8 ರಂದು ತಮ್ಮ ಶಿಷ್ಯ‌ ಶ್ರೀಸುಶ್ರೀಂದ್ರತೀರ್ಥರ ಒಡಗೂಡಿ ಶ್ರೀಸುಗುಣೇಂದ್ರತೀರ್ಥರು ಉಡುಪಿ ಪುರಪ್ರವೇಶ ಮಾಡಲಿದ್ದಾರೆ. ಧಾನ್ಯ ಮುಹೂರ್ತ ಅಂಗವಾಗಿ ಪುತ್ತಿಗೆ ಮಠದ ವಿಠಲ ದೇವರಿಗೆ ಬೆಳಗ್ಗಿನ […]