ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಜತೆ ಕುಡುಪು ಗುಂಪು ಹತ್ಯೆ, ರಹೀಮ್ ನ ಕೊಲೆಯನ್ನೂ ಎನ್ಐಎ ಗೆ ನೀಡಿ:ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಿಂದೀಚೆಗೆ ನಡೆದಿರುವ ಮೂರು ಕೊಲೆ ಪ್ರಕರಣಗಳು ಇಡೀ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕೊಲೆಗಳು ಒಂದಕ್ಕೊಂದು ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆಯಿದ್ದು, ಈ ಮೂರು ಪ್ರಕರಣಗಳನ್ನು ಕೂಡ ಎನ್ ‌ಐಎ ತನಿಖೆಗೆ ವಹಿಸಿದರೆ ದುಷ್ಜೃತ್ಯದ ಹಿಂದಿನ ಸತ್ಯ ಬಯಲಿಗೆ ಬರಲಿದೆ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಇಲಾಖೆಯು ಬಜಪೆ ಕಿನ್ನಿಪದವಿನಲ್ಲಿ ನಡೆದ ಸುಹಾಸ್ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿದೆ. […]