ಪಾಲಿಗ್ರಾಫ್ ಪರೀಕ್ಷೆಗೆ ಸಿದ್ಧ ಎಂದ ಸುಕೇಶ್ ಚಂದ್ರಶೇಖರ್: ಸತ್ಯಪರೀಕ್ಷೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಕೇಜ್ರಿವಾಲ್ ಗೂ ಪಂಥಾಹ್ವಾನ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣದ ಆರೋಪದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್ ಶುಕ್ರವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿಕೆ ಸಕ್ಸೇನಾ ಅವರಿಗೆ ಬರೆದಿರುವ ಹೊಸ ಪತ್ರದಲ್ಲಿ, ತಮ್ಮ ಭ್ರಷ್ಟಾಚಾರದ ಆರೋಪಗಳನ್ನು ದೃಢೀಕರಿಸಲು ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಗೆ ನೀಡಿದ್ದಾರೆ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ಕೂಡಾ ತನ್ನ ಜೊತೆ ಪರೀಕ್ಷೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. “ಕೇಜ್ರಿವಾಲ್ ಜಿ, ಸುಳ್ಳು ಎಂದು ಅಳುವ ಬದಲು, ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿಕೊಳ್ಳಲು ಎದೆಗಾರಿಕೆ ಮತ್ತು […]