ಕಿಂಡಿ ಅಣೆಕಟ್ಟಿನ ಹೂಳು ತೆಗೆದು ನೀರಿನ ಸಮಸ್ಯೆಗೆ ಪರಿಹಾರ: ಶಾಸಕ ಸುಕುಮಾರ್ ಶೆಟ್ಟಿ
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರುತ್ತಿದೆ. ಹೀಗಾಗಿ ಅಂತರ್ಜಲ ಮಟ್ಟ ಹೆಚ್ಚಿಸಲು ಪ್ರತೀ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಿಂಡಿ ಅಣೆಕಟ್ಟುಗಳನ್ನು ಗುರುತಿಸಿ ಅಲ್ಲಿರುವ ಹೂಳನ್ನು ಮೇಲೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಕಾರ್ಯಪ್ರವೃತ್ತರಾಗಬೇಕು ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಬಿಮ್ ಸುಕುಮಾರ್ ಶೆಟ್ಟಿ ಹೇಳಿದರು. ಅವರು ಬುಧವಾರ ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ […]