ಸುಳ್ಯ: ಕೆಎಸ್ಸಾರ್ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ; ಕಾಲೇಜು ವಿದ್ಯಾರ್ಥಿನಿ ಮೃತ್ಯು.

ಸುಳ್ಯ: ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಸಹೋದರಿ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ. ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಎಂಬವರ ಪುತ್ರಿ ರಚನಾ (20) ಮೃತರು. ಆಕೆಯ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ […]