ಸುಳ್ಯ: ಕುಸಿದು ಬಿದ್ದು ವ್ಯಕ್ತಿ ಮೃತ್ಯು.

ಮಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಅರಣ್ಯ ತಪಾಸಣ ಚೆಕ್‌ಪೋಸ್ಟ್ ನಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಕೂಡುಮಜಲು ಮುದಿಯಾರು ಸದಾಶಿವ ಗೌಡ (58) ಮೃತರು. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಶನಿವಾರ ರಾತ್ರಿ ಜಾಲ್ಸೂರಿನ ಅರಣ್ಯ ತಪಾಸಣ ಚೆಕ್‌ಪೋಸ್ಟ್‌ನಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗೆ ವೇಳೆಗೆ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಅರಣ್ಯ ಇಲಾಖೆಯ ಸಿಬಂದಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸುಳ್ಯದ ಖಾಸಗಿ […]