ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಅರೆಭಾಷೆ ಕಾಮಿಡಿ ಆಡಿಷನ್: ಫೆ.16ರಂದು ನಡೆಯಲಿದೆ ಮೊದಲ ಆಡಿಷನ್.

ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್‌ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆ.16ರಂದು ನಡೆಯಲಿದೆ ಈ ಬಗ್ಗೆ ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಾಜಿ ಅವರು ಮಾಹಿತಿ ನೀಡಿದರು. […]