ಸುಳ್ಯ ರಂಗ ಮನೆಯಲ್ಲಿ ಬಣ್ಣದ ಮಾಲಿಂಗ ಅವರ ಯಕ್ಷ ಪ್ರತಿಮೆ ಅನಾವರಣ: ವನಜ ರಂಗಮನೆ ಪ್ರಶಸ್ತಿ ಪ್ರದಾನ
ಮಂಗಳೂರು: ಬಣ್ಣದ ಮಾಲಿಂಗ ಅವರು ಚೌಕಿಗೆ ಬಂದು ತಪಸ್ಸಿನಂತೆ ವೇಷ ಹಾಕುವುದನ್ನು ಕಂಡಿದ್ದೇನೆ. ಅವರು ಬದುಕಿದ್ದಾಗಲೇ ದಂತಕತೆಯಾಗಿದ್ದವರು. ಈ ದಂತಕಥೆಯನ್ನು ಅವರ ಪ್ರತಿಮೆ ಮೂಲಕ ಇತಿಹಾಸ ಮಾಡಿದ ರಂಗಕರ್ಮಿ ಜೀವನ್ ರಾಮ್ ಸುಳ್ಯ ಅವರ ಸಾಧನೆ ಪ್ರಶಂಸನೀಯ, ಇದು ರಂಗಮನೆಯ ಹೆಗ್ಗಳಿಕೆಯಾಗಿದೆ ಎಂದು ಡಾ.ಮೋಹನ್ ಆಳ್ವ ಹೇಳಿದರು. ಅವರು ಭಾನುವಾರ ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗ ಮನೆಯಲ್ಲಿ ಹಮ್ಮಿಕೊಂಡ ಯಕ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಬಣ್ಣದ ಮಾಲಿಂಗ ಅವರ 15 ಅಡಿ ಎತ್ತರದ ಮಹಿರಾವಣ ವೇಷದ ಯಕ್ಷ ಪ್ರತಿಮೆಯನ್ನು […]