ಜೂನ್ 30ರೊಳಗೆ ಶರಣಾಗಿ; ಇಲ್ಲದಿದ್ದರೆ ಮನೆ ಜಪ್ತಿಗೆ ತಯಾರಾಗಿ: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಿಗೆ ಎನ್.ಐ.ಎ ವಾರ್ನಿಂಗ್
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಸ್ವಯಂ ಪ್ರೇರಿತವಾಗಿ ಜೂನ್.30ರೊಳಗೆ ಹಾಜರಾಗಬೇಕು ಎಂದು ಎನ್‌ಐಎ ಕೋರ್ಟ್ ಆದೇಶ ಹೊರಡಿಸಿದೆ. ಒಂದು ವೇಳೆ ಜೂನ್.30ರೊಳಗೆ ಶರಣಾಗದಿದ್ದಲ್ಲಿ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಎನ್‌ಐಎ ಕೋರ್ಟ್ ಹೇಳಿದೆ. ಈ ಬಗ್ಗೆ ಸುಳ್ಯದಲ್ಲಿ ಧ್ವನಿವರ್ಧಕದ ಮೂಲಕ ಸಂದೇಶ ನೀಡಲಾಗಿದೆ. ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಘೋಷಿಸಲಾಗಿದೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ […]
ಬೆಳ್ಳಾರೆ ಉದ್ವಿಗ್ನ: ನಳಿನ್ ಕುಮಾರ್ ಕಟೀಲ್ ಕಾರಿಗೆ ಮುತ್ತಿಗೆ; ಸಾರ್ವಜನಿಕರಿಂದ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್
ಸುಳ್ಯ: ನಿನ್ನೆ ತಡರಾತ್ರಿ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರೆ ಅವರ ಬರ್ಬರ ಹತ್ಯೆ ನಡೆದಿದ್ದು ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ್ದರೂ ಸಾರ್ವಜನಿಕರ ಆಕ್ರೋಶ ಮಾತ್ರ ತಣ್ಣಗಾಗಿಲ್ಲ. ಘಟನೆಯ ಬಳಿಕ ಸುದ್ದಿ ತಿಳಿದ ಸಂಸದ, ಸಚಿವರು, ಶಾಸಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ಜನತೆಯ ಮಡುಗಟ್ಟಿದ ಆಕ್ರೋಶ ಕಾರಿಗೆ ಮುತ್ತಿಗೆ ಹಾಕುವ ರೂಪದಲ್ಲಿ ವ್ಯಕ್ತವಾಗಿದೆ. ಸಂಸದ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್ ಮತ್ತು ಸ್ಥಳೀಯ ಶಾಸಕರ ಕಾರಿಗೆ ಮುತ್ತಿಗೆ […]
ಬಿಜೆಪಿ ಮುಖಂಡನ ಅಮಾನವೀಯ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ . ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ […]
ಸುಳ್ಯ: ಸಚಿವದ್ವಯರಿಂದ ಅತಿವೃಷ್ಟಿ ಪೀಡಿತ ಪ್ರದೇಶದ ಮನೆಗಳ ಪರಿಶೀಲನೆ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ತೋಡಿಕಾನ, ದೊಡ್ಡ ಕುಮೇರಿ, ಮತ್ತು ಕಲ್ಲುಗುಂಡಿ ಪ್ರದೇಶದ ಮನೆಗಳಿಗೆ ಮೀನುಗಾರಿಕಾ ಸಚಿವ ಎಸ್ ಅಂಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪ್ರದೇಶಗಳ ಸ್ಥಿತಿಗತಿ ನಿರೀಕ್ಷಿಸಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಜೊತೆಗಿದ್ದರು.
ನಮ್ಮ ಸಂಸ್ಕೃತಿ-ಪರಂಪರೆ ಮುಂದಿನ ತಲೆಮಾರಿಗೆ ತಿಳಿಸಲು ಮಾಧ್ಯಮ ಸಂಪರ್ಕ ಸೇತುವೆ: ಪ್ರಕಾಶ್ ಇಳಂತಿಲ
ಮಂಗಳೂರು: ಧನಾತ್ಮಕ ದೃಷ್ಟಿಕೋನದ ಪತ್ರಿಕೋದ್ಯಮದಿಂದ ಮಾತ್ರ ಆರೋಗ್ಯಪೂರ್ಣ ಸಮಾಜ ಕಟ್ಟಲು ಸಾಧ್ಯ. ನಮ್ಮ ಸಂಸ್ಕೃತಿ, ಪರಂಪರೆಯ ನೆಲೆಗಟ್ಟನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಮಾಧ್ಯಮಗಳು ಸೇತುವೆಯಾಗಿ ಕಾರ್ಯ ನಿರ್ವಹಿಸುತಿವೆ ಎಂದು ಹೊಸದಿಗಂತ ಪತ್ರಿಕೆಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಹೇಳಿದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ‘ಮಾಧ್ಯಮ ಮತ್ತು ಪ್ರಚಲಿತ ವಿದ್ಯಮಾನ’ ಎಂಬ ವಿಷಯದಲ್ಲಿ ಅವರು ಉಪನ್ಯಾಸ ನೀಡಿದರು. ಸ್ವಾತಂತ್ರ್ಯವನ್ನೂ ಪ್ರಜಾಪ್ರಭುತ್ವವನ್ನೂ ಜನರು ಸರಿಯಾಗಿ […]