ಕುಟುಂಬ ಯೋಜನಾ ಕ್ರಮ ಬಳಸಿ, ಜನಸಂಖ್ಯೆ ನಿಯಂತ್ರಿಸಿ: ಸುಮಿತ್ರಾ ನಾಯಕ್
ಉಡುಪಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ವಸತಿ ಸಮಸ್ಯೆಗಳು ಉಂಟಾಗುತ್ತಿದ್ದು, ಸಾರ್ವಜನಿಕರು ಆರೋಗ್ಯ ಇಲಾಖೆಯ ಕುಟುಂಬ ಯೋಜನಾ ಕ್ರಮಗಳನ್ನು ಬಳಸಿಕೊಂಡು ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹೇಳಿದರು. ಅವರು ಸೋಮವಾರ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ […]