ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಸುಂದರ ಗೌಡ ಮುದ್ರಾಡಿ ನಿಧನ

ಉಡುಪಿ: ಮಲೆಕುಡಿಯ ಸಂಘದ ಉಡುಪಿ ಜಿಲ್ಲಾಧ್ಯಕ್ಷರಾದ ಸುಂದರ ಗೌಡ ಮುದ್ರಾಡಿ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಒಂಬತ್ತು ತಿಂಗಳುಗಳಿಂದ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಹಾಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.