ಶ್ರೀಕೃಷ್ಣಮಠದಲ್ಲಿ ಸುಂದರಕಾಂಡ ಪ್ರವಚನ ಸಪ್ತಾಹ ಸಂಪನ್ನ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಶ್ರೀ ಹನುಮ ಜಯಂತಿ ಪ್ರಯುಕ್ತ ಸುಂದರಕಾಂಡ ಪ್ರವಚನ 6 ದಿನಗಳ ಕಾಲ ನಡೆಯಿತು. ಪ್ರವಚನ ನಡೆಸಿಕೊಟ್ಟ ವಿದ್ವಾನ್ ಶ್ರೀ ಬ್ರಹ್ಮಣ್ಯಾಚಾರ್ಯ ಇವರನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಗೌರವಿಸಿ ಅನುಗ್ರಹಸಿದರು. ಸಂಸ್ಥೆಯ ವತಿಯಿಂದ ಶ್ರೀಪಾದರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಪ್ರಾಯೋಜಕರಾದ ಕಿದಿಯೂರು ಹೋಟೆಲ್ ಮಾಲೀಕ ಭುವನೇಂದ್ರ ಕಿದಿಯೂರು, ಜಿತೇಶ್ ಕಿದಿಯೂರು , ಯುವರಾಜ್ ಮಾಸ್ಖತ್ , ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.