ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾಗಿ ವಿ ಸುನಿಲ್ ಕುಮಾರ್ ನಿಯುಕ್ತಿ
ಕಾರ್ಕಳ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರನ್ನಾಗಿ ನಿಯುಕ್ತಿ ಮಾಡಲಾಗಿದೆ. ಈ ಕುರಿತು ಮಾ. 14ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕರಾವಳಿ, ಬಂಟ, ಬಿಲ್ಲವ ಸಮುದಾಯದ ಕಾಳಜಿ ಇಲ್ಲದ ಬೋಗಸ್ ಬಜೆಟ್: ಸುನಿಲ್ ಕುಮಾರ್
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಇತ್ತೀಚಿನ ವರ್ಷಗಳಲ್ಲಿ ರಾಜ್ಯ ಕಂಡ ಕೆಟ್ಟ ಬಜೆಟ್ ಆಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿಲ್ಲ. ಬಜೆಟ್ ಪೂರ್ತಿ ಸುಳ್ಳುಗಳೇ ತುಂಬಿದ್ದು, ಮುಗ್ಗರಿಸುತ್ತಿರುವ ರಾಜ್ಯದ ಆರ್ಥಿಕತೆಯ ಪ್ರತಿಬಿಂಬ ಇದಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ. ಬಂಟ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸುತ್ತೇನೆ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಕೈ ಕೊಟ್ಟಿದ್ದಾರೆ. ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 1 ರೂ.ಅನುದಾನವನ್ನೂ ನೀಡಿಲ್ಲ. ಪಶ್ಚಿಮ ವಾಹಿನಿ […]
ಕಟ್ಟಡ ಕಾರ್ಮಿಕರ ಕಾರ್ಡ್ ನವೀಕರಣ ಸಮಸ್ಯೆ ವಿರುದ್ದ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಸುನಿಲ್ ಕುಮಾರ್
ಕಾರ್ಕಳ : ಕಟ್ಟಡ ಕಾರ್ಮಿಕರ ಕಾರ್ಡ್ ನವೀಕರಣಕ್ಕೆ ಹಲವಾರು ಎಡರು ತೊಡರುಗಳಿರುವ ಕಾರಣ ಸರಕಾರದಿಂದ ದೊರೆಯುವ ಸೌಲಭ್ಯ ಪಡೆಯುವಲ್ಲಿ ಕಟ್ಟಡ ಕಾರ್ಮಿಕರು ಪರದಾಡುವಂತಾಗಿದೆ. ಸರಕಾರದ ನೂತನ ನಿಯಮದಿಂದಾಗಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಇಲಾಖೆಯಿಂದ ಜಾರಿಗೆ ತರಲಾಗುವ ಕಾರ್ಡ್ ರಿನಿವಲ್‌ಗೆ ಸಮಸ್ಯೆಯಾಗಿದೆ. ನೂತನ ಕಾರ್ಡ್ ನಿರ್ಮಾಣವೂ ಸಾಧ್ಯವಾಗುತ್ತಿಲ್ಲ. ಕಟ್ಟಡ ನಿರ್ಮಾಣದಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಇತರ ನಿರ್ಮಾಣ ಹಂತದ ಕಾಮಗಾರಿ ಮಾಡುವ ಕೂಲಿ ಕಾರ್ಮಿಕರು, ಮರದ ಕೆಲಸದವರು, ಇಲೆಕ್ಟ್ರಿಶಿಯನ್, ಪ್ಲಂಬರ್, ರಸ್ತೆ ನಿರ್ಮಾಣ ಮಾಡುವ […]
ಪರಶುರಾಮ ಥೀಂ ಪಾರ್ಕ್ ಅವ್ಯವಹಾರ ಆರೋಪ: ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ
ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ತನಿಖೆ ನಡಸುವಂತೆ ಕಾರ್ಯಕರ್ತರ ಒತ್ತಡ ಹೆಚ್ಚಿದ್ದರಿಂದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸಿನಂತೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ. ಹಿಂದಿನ […]