ಅಕ್ರಮ ಗೋ ಸಾಗಾಟ, ಮತಾಂತರದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಸುನಿಲ್ ಕುಮಾರ್

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ. ಸುನಿಲ್ ಕುಮಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ […]