ಪರಶುರಾಮ ಪ್ರತಿಮೆ ವಿಚಾರದಲ್ಲಿ ಅಪಪ್ರಚಾರ ಮಾಡುವ ಬದಲು ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸಲಿ: ಕುಯಿಲಾಡಿ ಸುರೇಶ್ ನಾಯಕ್ ಸವಾಲು
ಉಡುಪಿ: ಪರಶುರಾಮನ ಪ್ರತಿಮೆ ವಿಚಾರದಲ್ಲಿ ಆಧಾರ ರಹಿತ ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ಸಿಗೆ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿಸಲು ಯಾಕೆ ಮನಸ್ಸು ಮಾಡುತ್ತಿಲ್ಲ. ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ಕಾಂಗ್ರೆಸಿಗರು ಹಾದಿ ಬೀದಿಗಳಲ್ಲಿ ಬೊಬ್ಬೆ ಹೊಡೆಯುವ ಬದಲು ಅಗತ್ಯ ವಿಚಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತು ನೀಡುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಸರಕಾರ ಆಡಳಿತ ನಡೆಸುತ್ತಿದೆ. ತನಿಖಾ ಸಂಸ್ಥೆಗಳು, ಅಧಿಕಾರಿಗಳು, ಸರ್ಕಾರಿ ಸಂಸ್ಥೆಗಳು […]
ನಾಗರಪಂಚಮಿಯಂದು ಉಭಯ ಜಿಲ್ಲೆಗಳಲ್ಲಿ ರಜೆ ಘೋಷಿಸಲು ಸುನಿಲ್ ಕುಮಾರ್ ಮನವಿ
ಉಡುಪಿ: ಆ 21 ರಂದು ಉಭಯ ಜಿಲ್ಲೆಗಳಲ್ಲಿ ನಾಗರ ಪಂಚಮಿಯ ವಿಶೇಷ ಆಚರಣೆಗಳು ಇರುವುದರಿಂದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕುಟುಂಬಗಳು ನಾಗದೇವರ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವ ದೃಷ್ಠಿಯಿಂದ ಶಾಲಾ-ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ
ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ
ಮುನಿಯಾಲು: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2023- 24 ರ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜೂನ್ 27 ರಂದು ನಡೆಯಿತು. ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ವಿ.ಸುನೀಲ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಸಕಲ ಸಹಕಾರದ ಭರವಸೆಯನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಬೇಬಿ ಶೆಟ್ಟಿ.ಕೆ ಅತಿಥಿಗಳನ್ನು ಸ್ವಾಗತಿಸಿ […]
ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳ ಮುಷ್ಕರ: ರೋಗಿಗಳಿಗೆ ಅನಾನುಕೂಲವಾಗದಂತೆ ಕ್ರಮವಹಿಸಲು ಸುನಿಲ್ ಕುಮಾರ್ ಮನವಿ
ಕಾರ್ಕಳ: ರಾಜ್ಯಾದ್ಯಂತ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿನ 167 ಡಯಾಲಿಸಿಸ್ ಕೇಂದ್ರಗಳಲ್ಲಿ ಸುಮಾರು 900 ಡಯಾಲಿಸಿಸ್ ಸಿಬ್ಬಂದಿಗಳು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದರಿ ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವುದು ತಿಳಿದುಬಂದಿದೆ. ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 05 ಜನ ಸಿಬ್ಬಂದಿಗಳು ಕರ್ತವ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್ ಕೇಂದ್ರದಲ್ಲಿ ನಿರಂತರವಾಗಿ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ದಿನ ಸುಮಾರು 15 ರಿಂದ 20 ರೋಗಿಗಳು ಡಯಾಲಿಸಿಸ್‌ಗೆ […]
ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್
ಕಾರ್ಕಳ : ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡಿದಂತೆ ಖಾಸಗಿ ಬಸ್‌ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇದರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ. ಉಡುಪಿ, ದಕ್ಷಿಣ ಕನ್ನಡ […]