ಸುರತ್ಕಲ್ ಟೋಲ್ ಗೇಟ್ ವಿರುದ್ದದ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಜನತೆಯನ್ನು ಸುಲಿಗೆ ಮಾಡಿ ಹಗಲು ದರೋಡೆ ಮಾಡುತ್ತಿದೆ. ಈ ಟೋಲ್ ಗೇಟ್ ಅನಧಿಕೃತವೆಂದು ಸರಕಾರವೇ ಒಪ್ಪಿಕೊಂಡಿದ್ದರೂ, ಇನ್ನೂ ತೆರವು ಮಾಡದಿರುವುದು ಜಿಲ್ಲೆಯ ಜನತೆಗೆ ಬಗೆದ ದ್ರೋಹ. ಕಾರ್ಕಳದ ಜನರೂ ಇದರಿಂದ ಸಂತ್ರಸ್ತರಾಗಿದ್ದಾರೆ. ಆದ್ದರಿಂದ ಅಕ್ರಮವಾಗಿ ಸುಲಿಗೆ ಮಾಡುತ್ತಿರುವ ಸುರತ್ಕಲ್ ಟೋಲ್ ಗೇಟ್ ಕೂಡಲೇ ಬಂದ್ ಆಗಬೇಕು. ಟೋಲ್ ನ ವಿರುದ್ಧ ನಡೆಯುವ ಯಾವುದೇ ಹೋರಾಟಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಶನಿವಾರದಂದು ಸುರತ್ಕಲ್ […]

ಮಂಗಳೂರು: ನೆಹರೂ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ; ಸಾಧಕರಿಗೆ ಸನ್ಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಧ್ವಜಾರೋಹಣ ಮಾಡಿದರು. ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಪ್ರಭಾರಿ ಜಿಲ್ಲಾಧಿಕಾರಿ ಆರ್.ಕುಮಾರ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ವೈ ಭರತ್ ಶೆಟ್ಟಿ, ಉಮಾನಾಥ್ […]

ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ತಣ್ಣೀರಬಾವಿ ಕಡಲ ತೀರದಲ್ಲಿ ಕರಾವಳಿ ಉತ್ಸವ

ಮಂಗಳೂರು: ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಕರಾವಳಿ ಉತ್ಸವವನ್ನು ಡಿಸೆಂಬರ್ 23 ರಿಂದ ಜನವರಿ 1 ರವರೆಗೆ ತಣ್ಣೀರಬಾವಿ ಕಡಲ ತೀರದಲ್ಲಿ ಆಯೋಜಿಸಲಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಮತ್ತು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವದ ಸುಗಮ ನಿರ್ವಹಣೆಗೆ ವಿವಿಧ ಸಮಿತಿಗಳು ಹಾಗೂ ಉಪಸಮಿತಿಗಳನ್ನು ಶೀಘ್ರ ರಚಿಸಲಾಗುವುದು ಎಂದರು. ಈ ಪ್ರದೇಶದ […]

ತೆರೆಮರೆಯ ಅರ್ಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಸಚಿವ ಸುನಿಲ್ ಕುಮಾರ್

ಉಡುಪಿ: ಈ ಬಾರಿಯ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 9823 ಅರ್ಜಿಗಳು ಬಂದಿವೆ. ಆದರೆ ಈ ಬಾರಿ ತೆರೆಯಮರೆಯಲ್ಲಿನ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಈ ಕುರಿತು ಈಗಾಗಲೇ ಆಯ್ಕೆ ಸಮಿತಿ ರಚನೆಯಾಗಿದ್ದು ಪ್ರಥಮ ಸಭೆ ಕೂಡಾ ಮುಗಿದಿದೆ ಆದಷ್ಟು ಶೀಘ್ರದಲ್ಲಿ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಭಾನುವಾರ ಆದಿ ಉಡುಪಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ […]

ಸಿಂಗಲ್ ಲೇಔಟ್ ಸಮಸ್ಯೆ: ಕೋರ್ಟ್ ಆದೇಶಕ್ಕನುಗುಣವಾಗಿ ಖಾತಾ ನೀಡುವಂತೆ ಪುರಸಭಾ ಸದಸ್ಯ ಶುಭದಾರಾವ್ ಆಗ್ರಹ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾಧ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಿರಲಿಲ್ಲ. ಆದರೀಗ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ ಭರವಸೆಯನ್ನು ಮೂಡಿಸಿದೆ. ಈ‌ ಆದೇಶವನ್ನೇ ಮಾದರಿಯಾಗಿ ಎಲ್ಲಾ ಅರ್ಜಿದಾರರಿಗೂ ಖಾತಾ ನೀಡುವಂತೆ ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ. ನಗರದಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]