ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸಿ ಸ್ವಾತಂತ್ರ‍್ಯ ಹೋರಾಟಕ್ಕೆ ನಿಜವಾದ ಗೌರವ ಸಲ್ಲಿಸಿ: ಸುನೀಲ್ ಕುಮಾರ್

ಉಡುಪಿ: ದೇಶಕ್ಕೆ ಸ್ವಾತಂತ್ಯ್ರ ಸಿಗುವಾಗ ನಾವ್ಯಾರೂ ಹುಟ್ಟಿರಲಿಲ್ಲ, ನಾವು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗವಹಿಸಿಲ್ಲ, ಈಗ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಲ್ಲಿ ಭಾಗವಹಿಸುವ ಸದವಕಾಶ ಸಿಕ್ಕಿದೆ. ಆದ್ದರಿಂದ 3 ದಿನಗಳ ಕಾಲ ಸಂಪೂರ್ಣವಾಗಿ ಆಜಾದಿ ಕಾ ಅಮೃತ್ ಮಹೋತ್ಸವದಲ್ಲಿ ಭಾಗವಹಿಸುವ ಮೂಲಕ ಸ್ವಾತಂತ್ರ‍್ಯ ಹೋರಾಟಕ್ಕೆ ನಿಜವಾದ ಗೌರವವನ್ನು ಸಲ್ಲಿಸಬೇಕು. ಪ್ರತಿಯೊಂದು ಮನೆಯಲ್ಲಿಯೂ ದೇವರ ಪೂಜೆಯಷ್ಟೇ ಗೌರವದಿಂದ ಮನೆಮಂದಿ ಸೇರಿ ಸಿಹಿ ವಿತರಿಸಿ ರಾಷ್ಟ್ರಗೀತೆ ಹಾಡಿ ಸಂಭ್ರಮದಿಂದ ಧ್ವಜಾರೋಹಣ ನಡೆಸಬೇಕು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ […]

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮರು ಸೇರ್ಪಡೆ

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಅಳವಡಿಸಿದ್ದು, ಅದರ ಬದಲು ಸಮಾಜ ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ಸಚಿವ ಸುನಿಲ್ ಕುಮಾರ್ ಅವರ ಕೋರಿಕೆಯ ಹಿನ್ನೆಲೆಯಲ್ಲಿ ಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲು ಸರ್ಕಾರಿ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸರಕಾರದ ಈ ನಿರ್ಧಾರವನ್ನು ಸ್ವಾಗತಿಸಿರುವ ಬಿಲ್ಲವ ಸಮಾಜವು ಅಧಿಕೃತ ಆದೇಶ ಬಂದ ಕೂಡಲೇ ಈಗಾಗಲೇ ಕರೆ […]

ಮಂಗಳೂರಿನಲ್ಲಿ ಗ್ರೀನ್ ಹೈಡ್ರೋಜನ್, ಸೋಲಾರ್ ಘಟಕ ಸ್ಥಾಪನೆ: ಆಕ್ಮೆ ಕಂಪನಿ ಜೊತೆ 52000 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಬೊಮ್ಮಾಯಿ ಸೋಮವಾರ ಆಕ್ಮೆ(ACME) ಕ್ಲೀನ್ಟೆಕ್ ಸೊಲುಷನ್ ಪ್ರೈವೇಟ್ ಲಿಮಿಟೆಡ್ ಗ್ರೂಪ್ ಜೊತೆ ಮಂಗಳೂರಿನಲ್ಲಿ 52000 ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಕಂಪೆನಿಯು ಮಂಗಳೂರಿನಲ್ಲಿ ಗ್ರೀನ್ ಹೈಡ್ರೋಜನ್, ಅಮೋನಿಯಾ ಘಟಕ ಸ್ಥಾಪನೆ ಹಾಗೂ ಪೂರಕವಾಗಿ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆಗೆ ಕರ್ನಾಟಕ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಇಂಧನ ಸಚಿವ ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. […]

ಕಾರ್ಕಳ: ಹೆಬ್ರಿ ತಾಲೂಕು ನೂತನ ಆಡಳಿತ ಸೌಧ ಕಟ್ಟಡ ಲೋಕಾರ್ಪಣೆ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಬುಧವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ತದನಂತರ ಹೆಬ್ರಿಯ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ನೀರಾವರಿ ಸಚಿವ ಗೋವಿಂದ ಕಾರಜೋಳ , ಇಂಧನ ಸಚಿವ ಸುನಿಲ್ ಕುಮಾರ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ […]

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಉದ್ಘಾಟನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಉದ್ಘಾಟಿಸಿದರು. ಎಣ್ಣೆಹೊಳೆ ಏತ ನೀರಾವರಿ ಯೋಜನಾ ಸ್ಥಳದಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್ ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್ ಅಂಗಾರ, ಶಾಸಕರಾದ ರಘುಪತಿ ಭಟ್, ಲಾಲಾಜಿ […]