ಹೆಬ್ರಿ: ಅಟಲ್ ಜನಸ್ನೇಹಿ ಕೇಂದ್ರ ಲೋಕಾರ್ಪಣೆ ಮಾಡಿದ ಇಂಧನ ಸಚಿವ ಸುನಿಲ್ ಕುಮಾರ್

ಉಡುಪಿ: ಹೆಬ್ರಿಯನ್ನು ತಾಲ್ಲೂಕಾಗಿ ಪರಿವರ್ತಿಸಿದ್ದು, ತಾಲ್ಲೂಕು ಕಚೇರಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ. ನಾಡಾ ಕಚೇರಿ, ಅಟಲ್ ಜನಸ್ನೇಹಿ ಕೇಂದ್ರ ಇಲ್ಲದೆ ಜನತೆಯ ಕಚೇರಿ ಕೆಲಸಗಳಿಗೆ ಸಮಸ್ಯೆಯಾಗಿದ್ದು, ಈಗ ನೂತನ ತಾಲ್ಲೂಕು ಕಟ್ಟಡದ ಲೋಕಾರ್ಪಣೆಯ ವೇಳೆ ಅಟಲ್ ಜನಸ್ನೇಹಿ ಕೇಂದ್ರ ಆರಂಭವಾಗಿರುವುದು ಅತ್ಯಂತ ಖುಷಿ ನೀಡಿದೆ. ಜನರ ಸೇವೆಗೆ ನಾವು ಸದಾ ಸಿದ್ಧ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ಆರಂಭಗೊಂಡ […]
ಭಾರತ@75: ಕರ್ನಾಟಕ ಸಂಸ್ಕೃತಿ ಇಲಾಖೆಯಿಂದ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರದ ‘ಹರ್ ಘರ್ ಝಂಡಾ’ ಕರೆಯನ್ನು ರಾಜ್ಯದಲ್ಲೂ ವಿಸ್ತರಿಸುವ ಪ್ರಕ್ರಿಯೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಗಸ್ಟ್ 9 ರಿಂದ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಒತ್ತಾಯಿಸಿದೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರವು ತನ್ನ ‘ಅಮೃತ ಭಾರತಿಗೆ ಕನ್ನಡದ ಆರತಿ’ ಅಭಿಯಾನದ ಭಾಗವಾಗಿ ‘ಮನೆ ಮನೆಯಲ್ಲಿ ರಾಷ್ಟ್ರಧ್ವಜ’ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಪ್ರತಿ ಮನೆಯಲ್ಲಿಯೂ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ನಾಗರಿಕರು […]
ಮೇ 15- ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶವನ್ನು ಉದ್ಘಾಟಿಸಲಿರುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ […]
ಸಹಕಾರಿ ಬ್ಯಾಂಕಿನ ನಿರಂತರ ಪ್ರೋತ್ಸಾಹದಿಂದ ಮಹಿಳಾ ಸಬಲೀಕರಣ – ಸುನಿಲ್ ಕುಮಾರ್

ಮಣಿಪಾಲದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ 111ನೇ ಶಾಖೆ, ಮೊಬೈಲ್ ಬ್ಯಾಂಕ್ ಉದ್ಘಾಟನೆ ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) ಇದರ 111ನೇ ಶಾಖೆ ಮತ್ತು ಉಡುಪಿ ಮೊಬೈಲ್ ಬ್ಯಾಂಕ್ ಮಣಿಪಾಲದಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆಯ ಮಾಡುವ ಮೂಲಕ ನೂತನ ಶಾಖೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಂ. ಐ. ಟಿ. ಕಾಲೇಜ್ ಬಳಿಯ ಮೈದಾನದಲ್ಲಿ ನಡೆದ ನವೋದಯ […]
ಕುಕ್ಕುಂದೂರು : ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಕ್ಕುಂದೂರು : ವಾಣಿಜ್ಯ ನಗರಿಯಾಗಿ ಬೆಳೆಯುತ್ತಿರುವ ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯ ಜೋಡುರಸ್ತೆಯಲ್ಲಿ ಸುಮಾರು 6.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ಚರಂಡಿ, ಅಲಂಕಾರಿಕಾ ಬೀದಿ ದೀಪಗಳ ಅಳವಡಿಕೆ ಹಾಗೂ ಎರಡು ಬದಿಯ ಪಾದಾಚಾರಿ ಮಾರ್ಗಕ್ಕೆ ಇಂಟರ್ ಲಾಕ್ ಅಳವಡಿಕೆಯ ಕಾಮಗಾರಿಗೆ ಎ. 25 ರಂದು ಬೆಳಿಗ್ಗೆ 8 ಗಂಟೆಗೆ ಸಚಿವ ವಿ. ಸುನಿಲ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸ್ವರ್ಣ ಕಾರ್ಕಳ ಸ್ವಚ್ಛ ಕಾರ್ಕಳ ಪರಿಕಲ್ಪನೆಯಡಿ ಕ್ಷೇತ್ರಾದ್ಯಂತ […]