ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್.!

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ. ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು. ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಲ್ಲಿಗೆ […]