ಜನೌಷಧಿ ಕೇಂದ್ರಗಳ ಮೂಲಕ ಕಡಿಮೆ ಬೆಲೆಯಲ್ಲಿ ಔಷಧ ಪೂರೈಕೆ: ಡಿ.ಹೆಚ್.ಓ
ಉಡುಪಿ: ಸಾರ್ವಜನಿಕರಿಗೆ, ಬಡವರಿಗೆ, ರೈತಾಪಿವರ್ಗದವರಿಗೆ ಹಾಗೂ ಮಧ್ಯಮ ವರ್ಗದವರಿಗೆ ನಿರಂತರವಾಗಿ ಕಡಿಮೆ ಬೆಲೆಯಲ್ಲಿ ಔಷಧಿಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಜನೌಷಧಿಯು ಭಾರತ ದೇಶದಲ್ಲಿ ಔಷಧ ಉತ್ಪಾದನೆ ಹಾಗೂ ವಿತರಣೆಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು. ಅವರು ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ […]