ಸಾಲಗಾರರಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್: ನ.15ರ ವರೆಗೆ ಕಟ್ಟಬೇಕಿಲ್ಲ ಚಕ್ರಬಡ್ಡಿ
ನವದೆಹಲಿ: ವಿವಿಧ ಬ್ಯಾಂಕ್ ಗಳಿಂದ ಸಾಲ ಪಡೆದುಕೊಂಡವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ನವೆಂಬರ್ 15ರ ವರೆಗೆ ಬಡ್ಡಿ ಮೇಲೆ ಬಡ್ಡಿಯನ್ನು ಗ್ರಾಹಕರು ಪಾವತಿಸಬೇಕಾಗಿಲ್ಲ ಎಂದು ಕೋರ್ಟ್ ಆದೇಶಿಸಿದೆ. ನ. 15ರ ವರೆಗೆ ಯಾವುದೇ ಸಾಲ ಖಾತೆಯನ್ನು ನಿಷ್ಕ್ರಿಯ ಆಸ್ತಿ ಎಂದು ಘೋಷಿಸಲಾಗುವುದಿಲ್ಲ ಎಂದು ಹೇಳಿರುವ ಕೋರ್ಟ್, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಮನವಿಯ ಮೇರೆಗೆ ಪ್ರಕರಣದ ವಿಚಾರಣೆಯನ್ನು ನವೆಂಬರ್ 2 ರವರೆಗೆ ಮುಂದೂಡಿದೆ. ಬಡ್ಡಿ ಮನ್ನಾ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. […]