ಜ್ಞಾನವಾಪಿ ಪ್ರಕರಣ: ‘ಶಿವಲಿಂಗ’ದಾಕೃತಿ ಸ್ಥಳದ ಸ್ವಚ್ಛತೆಗೆ ‘ಸುಪ್ರೀಂ’ ಆದೇಶ
ನವದೆಹಲಿ: ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಅವರಣದಲ್ಲಿರುವ ಶಿವಲಿಂಗದಾಕೃತಿ ಸ್ಥಳದ ಸಂಪೂರ್ಣ ಸ್ವಚ್ಛತೆಗೆ ‘ಸುಪ್ರೀಂ ಕೋರ್ಟ್’ ಮಂಗಳವಾರ ಆದೇಶ ನೀಡಿದೆ. ವಾರಣಾಸಿಯ ಜ್ಞಾನವಾಪಿ ‘ವಜುಖಾನಾ’ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಸೀದಿ ಸಂಕೀರ್ಣದ ವಜುಖಾನಾದ ಸಂಪೂರ್ಣ ಪ್ರದೇಶವನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಆದೇಶ ಹೇಳಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ಜೆ.ಬಿ. ಪರ್ದೀವಾಲಾ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ವಾರಣಾಸಿ […]
ಜಮ್ಮು-ಕಾಶ್ಮೀರದ 370 ನೇ ವಿಧಿ ರದ್ದತಿ ಪರ ಸುಪ್ರೀಂ ಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ: ದಾವೂದ್ ಅಬೂಬಕ್ಕರ್
ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರ ಬದುಕಿಗೆ ಸುರಕ್ಷತೆ ಒದಗಿಸುವ 370 ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಕೈಗೊಂಡ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠವು ಎತ್ತಿ ಹಿಡಿದಿರುವುದು ಸತ್ಯಕ್ಕೆ ಸಂದ ಜಯ ಎಂದು ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಹೇಳಿದ್ದಾರೆ. ಉನ್ನತ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯ, ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ […]
ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತಿಲ್ಲ: ಕೇಂದ್ರದ ಪ್ರಸ್ತಾವಿತ ಉನ್ನತ ಅಧಿಕಾರ ಸಮಿತಿಗೆ ಜವಾಬ್ದಾರಿ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತಿಲ್ಲ ಎಂದು 3-2 ಬಹುಮತದಿಂದ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಸರ್ವೋಚ್ಚ ನ್ಯಾಯಾಲಯವು ನಾಲ್ಕು ತೀರ್ಪುಗಳನ್ನು ನೀಡಿತು ಮತ್ತು ಹಲವಾರು ಅವಲೋಕನಗಳನ್ನು ಮಾಡಿತು. ಮೇ 11 ರಂದು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರು 10 ದಿನಗಳ ಮ್ಯಾರಥಾನ್ ವಿಚಾರಣೆಯ […]
ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ತಲೆಬಾಗಬೇಕಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ರಾಜ್ಯದ ಮುಖ್ಯಮಂತ್ರಿಗಳು ಮೂರು ದಿನ ದೆಹಲಿಯಲ್ಲಿದ್ದು ಕಾವೇರಿ ನೀರು ಹಂಚಿಕೆ ಕುರಿತಾಗಿ ಚರ್ಚೆ ಮಾಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಗಿ ಪ್ರಾರ್ಥಿಸಬೇಕು. ರಾಜ್ಯಕ್ಕೆ ಅನ್ಯಾಯ ಆಗಬಾರದು ಎಂಬುದು ನನ್ನ ನಿಲುವಾಗಿದೆ. ಕಾಂಗ್ರೆಸ್ ಜನಪರವಾಗಿದ್ದು, ಜನರನ್ನು ಬಿಟ್ಟು ಬೇರೆ ಏನು ಮಾಡಲು ಸಾಧ್ಯವಿಲ್ಲ. ನೀರಾವರಿ […]
ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಉದಯನಿಧಿ ಮತ್ತು ಇತರರ ವಿರುದ್ದ ನೋಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಸುಪ್ರೀಂ ಕೋರ್ಟ್ ಪೀಠವು ಡೆಂಗ್ಯೂ, ಮಲೇರಿಯಾ ಮತ್ತು ಕರೋನಾ ಮುಂತಾದ ಕಾಯಿಲೆಗಳೊಂದಿಗೆ ಹೋಲಿಸಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವಂತೆ ಕರೆ ನೀಡಿದ ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮವನ್ನು ವಿರೋಧಿಸುವ ಬದಲು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂದು ಸಮ್ಮೇಳನವನ್ನು ಕರೆದಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸುತ್ತೇನೆ ಎಂದು ಉದಯನಿಧಿ ಹೇಳಿದ್ದರು. ನಾವು ನಿರ್ಮೂಲನೆ ಮಾಡಬೇಕಾದ ಕೆಲವು ವಿಷಯಗಳಿವೆ […]