ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕಾನೂನು ತಕ್ಷಣ ಬದಲಾಯಿಸಲು ಸಾಧ್ಯವಿಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಸಿಂಧುತ್ವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ನಡುವೆ, ಹೊಸದಾಗಿ ನೇಮಕಗೊಂಡ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತರಗತಿಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರವು ತಕ್ಷಣವೇ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದ ಭಾಗವಾಗಿ ಹಿಜಾಬ್ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ ಬಂಗಾರಪ್ಪ, “ಹಿಜಾಬ್‌ನಲ್ಲಿನ […]

ಜಲ್ಲಿಕಟ್ಟು- ಕಂಬಳ-ಎತ್ತಿನ ಗಾಡಿ ಓಟಕ್ಕೆ ಅನುಮತಿ: ಸಾಂಸ್ಕೃತಿಕ ಪರಂಪರೆ ನ್ಯಾಯಾಂಗದ ಭಾಗವಾಗಬಾರದು ಎಂದ ಸುಪ್ರೀಂ ಕೋರ್ಟ್

ನವದೆಹಲಿ: ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಾಂಪ್ರದಾಯಿಕ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, “ ಶಾಸಕಾಂಗವು ಇದನ್ನು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ ಎಂಬ ದೃಷ್ಟಿಕೋನವನ್ನು ತೆಗೆದುಕೊಂಡಿದೆ ಆದ್ದರಿಂದ ನಾವು ಶಾಸಕಾಂಗದ ದೃಷ್ಟಿಕೋನವನ್ನು ಅಡ್ಡಿಪಡಿಸುವುದಿಲ್ಲ. ಸಂವಿಧಾನದ ಮುನ್ನುಡಿಯಲ್ಲಿ ಇದನ್ನು ತಮಿಳುನಾಡಿನ ಸಂಸ್ಕೃತಿ […]

ಶಿವಸೇನೆ ಬಂಡಾಯ: ಉದ್ದವ್ ಠಾಕ್ರೆಗೆ ಹಿನ್ನಡೆ; ಶಿಂಧೆ ಬಣವನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಕಳೆದ ವರ್ಷ ನಡೆದ ಶಿವಸೇನೆ ಬಂಡಾಯಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರಿಗೆ ಹಿನ್ನಡೆಯಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಗಿನ ರಾಜ್ಯಪಾಲರ ಕಾನೂನುಬಾಹಿರ ನಿರ್ಧಾರದಿಂದ ಲಾಭ ಗಳಿಸಿದ್ದು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದಕ್ಕಾಗಿ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ನ್ಯಾಯಾಧೀಶರ ದೊಡ್ಡ ಸಮಿತಿಯು ಅದರ ಮೇಲೆ ತೀರ್ಪು ನೀಡುವವರೆಗೆ ಆ ಅಧಿಕಾರವು […]

ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಲು ಕೇರಳ ಹೈಕೋರ್ಟ್ ನಕಾರ

ತಿರುವನಂತಪುರಂ: ಶುಕ್ರವಾರ ಮಧ್ಯಂತರ ಆದೇಶ ನೀಡಿದ ಕೇರಳ ಹೈಕೋರ್ಟ್, ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನಕ್ಕೆ ತಡೆ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದೆ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ನೀಡಿದ ‘ಎ’ ಪ್ರಮಾಣೀಕರಣವನ್ನು ಕಾನೂನುಬಾಹಿರ ಎಂದು ಘೋಷಿಸಲು ನಿರಾಕರಿಸಿದೆ. ನಾಗರೇಶ್ ಮತ್ತು ಸೋಫಿ ಥಾಮಸ್ ಅವರಿದ್ದ ವಿಭಾಗೀಯ ಪೀಠವು ವಿವಿಧ ಸಂಘಟನೆಗಳ ಪ್ರತಿಭಟನೆಯ ನಡುವೆ ಶುಕ್ರವಾರ ಕೇರಳದಲ್ಲಿ ಬಿಡುಗಡೆಯಾದ ಚಲನಚಿತ್ರದ ಪ್ರದರ್ಶನವನ್ನು ನಿಷೇಧಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಸಲಾದ ರಿಟ್ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. […]

ಅಗ್ನಿಪಥ ಯೋಜನೆಯ ಸಿಂಧುತ್ವವನ್ನು ದೃಢಪಡಿಸಿದ ಸುಪ್ರೀಂ ಕೋರ್ಟ್: ಮೇಲ್ಮನವಿ ವಜಾ

ನವದೆಹಲಿ: ಕೇಂದ್ರದ ಅಗ್ನಿಪಥ ಯೋಜನೆಯನ್ನು ಎತ್ತಿ ಹಿಡಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವ ಶ್ಲಾಘನೀಯ ಉದ್ದೇಶದೊಂದಿಗೆ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಅಗ್ನಿಪಥ್ ಯೋಜನೆಯನ್ನು ರೂಪಿಸಲಾಗಿದೆ ಎಂದು ಫೆಬ್ರವರಿ 27 ರಂದು ಹೈಕೋರ್ಟ್ ಹೇಳಿತ್ತು. ಈ ಯೋಜನೆಯ ಸಿಂಧುತ್ವಕ್ಕೆ ಧಕ್ಕೆಯುಂಟು ಮಾಡುವ ಅರ್ಜಿಗಳ ಬ್ಯಾಚ್ ಅನ್ನು ಕೆಳಗಿನ ನ್ಯಾಯಾಲಯವು ವಜಾಗೊಳಿಸಿತ್ತು ಮತ್ತು ಕೇಂದ್ರದ “ಉತ್ತಮ ಚಿಂತನೆಯ” ನೀತಿ ನಿರ್ಧಾರ ಎಂದು ಬಣ್ಣಿಸಿತ್ತು. ಇದೀಗ, ಕೇಂದ್ರದ ಅಗ್ನಿಪಥ […]