ಸುರತ್ಕಲ್ ಟೋಲ್ ಗೇಟ್ ಹೋಯಿತು; ಹೆಜಮಾಡಿಯಲ್ಲಿ ಸುಂಕ ಏರಿತು: ಡಿ.1 ರಿಂದ ಪರಿಷ್ಕೃತ ಶುಲ್ಕ ಜಾರಿ
ಮಂಗಳೂರು: ಸುರತ್ಕಲ್ ಟೋಲ್ ಗೇಟನ್ನು ಎನ್ಎಚ್ 66 ರಲ್ಲಿ ವಿಲೀನಗೊಳಿಸಿದ ನಂತರ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನವೆಂಬರ್ 24 ರಂದು ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪರಿಷ್ಕೃತ ಬಳಕೆದಾರರ ಶುಲ್ಕ ದರಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಬಳಕೆಯ ಶುಲ್ಕ ದರ ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ. ಕಾರು, ಜೀಪ್, ವ್ಯಾನ್ ಮುಂತಾದ ಲಘು ಮೋಟಾರು ವಾಹನಗಳಿಗೆ ಸುರತ್ಕಲ್ ಟೋಲ್ ನಲ್ಲಿ ಒಂದು ಟ್ರಿಪ್‌ಗೆ ಪ್ರಸ್ತುತ ಶುಲ್ಕ ರೂ 60 ಮತ್ತು ಹೆಜಮಾಡಿ ಟೋಲ್ ನಲ್ಲಿ […]
ಸುರತ್ಕಲ್ ಟೋಲ್ ಗೇಟ್ ರದ್ದಿಗೆ ಕೇಂದ್ರ ಅಸ್ತು: ಟ್ವೀಟ್ ಮಾಡಿ ಮಾಹಿತಿ ನೀಡಿದ ಸಂಸದ
ಸುರತ್ಕಲ್: ಕಳೆದ ಏಳು ವರ್ಷಗಳ ನಿರಂತರ ಬೇಡಿಕೆ ಮತ್ತು ಎಡೆಬಿಡದ ಹೋರಾಟದ ಬಳಿಕ ಕಡೆಗೂ ಸುರತ್ಕಲ್ ಟೋಲ್ ಗೇಟ್ ರದ್ದಾಗಿ ಜನರಿಗೆ ನರಕದಿಂದ ಮುಕ್ತಿ ದೊರೆಯಲಿದೆ. ಟೋಲ್ ಗೇಟ್ ರದ್ದಾಗುವ ಬಗ್ಗೆ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು […]
ಸುರತ್ಕಲ್ ಟೋಲ್ ಗೇಟ್ ವಿರುದ್ದದ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ
ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಜನತೆಯನ್ನು ಸುಲಿಗೆ ಮಾಡಿ ಹಗಲು ದರೋಡೆ ಮಾಡುತ್ತಿದೆ. ಈ ಟೋಲ್ ಗೇಟ್ ಅನಧಿಕೃತವೆಂದು ಸರಕಾರವೇ ಒಪ್ಪಿಕೊಂಡಿದ್ದರೂ, ಇನ್ನೂ ತೆರವು ಮಾಡದಿರುವುದು ಜಿಲ್ಲೆಯ ಜನತೆಗೆ ಬಗೆದ ದ್ರೋಹ. ಕಾರ್ಕಳದ ಜನರೂ ಇದರಿಂದ ಸಂತ್ರಸ್ತರಾಗಿದ್ದಾರೆ. ಆದ್ದರಿಂದ ಅಕ್ರಮವಾಗಿ ಸುಲಿಗೆ ಮಾಡುತ್ತಿರುವ ಸುರತ್ಕಲ್ ಟೋಲ್ ಗೇಟ್ ಕೂಡಲೇ ಬಂದ್ ಆಗಬೇಕು. ಟೋಲ್ ನ ವಿರುದ್ಧ ನಡೆಯುವ ಯಾವುದೇ ಹೋರಾಟಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಶನಿವಾರದಂದು ಸುರತ್ಕಲ್ […]
ಅಕ್ರಮ ಟೋಲ್ ಗೇಟ್ ವಿರೋಧಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ
ಸುರತ್ಕಲ್: ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದ್ದು, ಮುಂಜಾನೆಯೆ ಟೋಲ್ ಗೇಟ್ ಬಳಿ ಹೋರಾಟ ಸಮಿತಿ ಮುಖಂಡರು ಮತ್ತು ಸದಸ್ಯರು ಧರಣಿ ಕೂತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್ ತೆರವಿಗೆ ದಿನಾಂಕ ಮುಂದೂಡುತ್ತಲೇ ಬಂದಿದ್ದಾರೆ. ಈಗ ನವೆಂಬರ್ 9 ಗಡುವು ನೀಡಿದ್ದಾರೆ. ಆದರೆ […]
ಪ್ರತಿಭಾ ಕುಳಾಯಿ ಮಾನಹಾನಿಕರ ಪೋಸ್ಟ್ ಪ್ರಕರಣ: ಎರಡನೇ ಆರೋಪಿ ನ್ಯಾಯಾಲಯಕ್ಕೆ ಹಾಜರ್
ಮಂಗಳೂರು: ಕಾಂಗ್ರೆಸ್ ನಾಯಕಿ, ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಎರಡನೇ ಆರೋಪಿ ಅಡ್ಯಾರ್ ಪದವು ನಿವಾಸಿ ಕೆ.ಆರ್.ಶೆಟ್ಟಿ ಗುರುವಾರದಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನ ವಕೀಲರ ಜೊತೆ ನ್ಯಾಯಾಲಯಕ್ಕೆ ಹಾಜರಾಗಿರುವ ಆತನನ್ನು ನ್ಯಾಯಾಲಯವು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಶೆಟ್ಟಿ ಪೋಸ್ಟ್ ಮಾಡಿದ ಪೋಸ್ಟ್ ಗೆ ಶ್ಯಾಮ್ ಸುದರ್ಶನ್ ಭಟ್ ಎನ್ನುವವರು ಅಸಭ್ಯ ಟಿಪ್ಪಣಿಯನ್ನು ಬರೆದಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ […]