ಸುರತ್ಕಲ್ ಟೋಲ್‌ಗೇಟ್ ವಿಚಾರದಲ್ಲಿ ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ: ವಿನಯ್ ಕುಮಾರ್ ಸೊರಕೆ

ಉಡುಪಿ: ಸುರತ್ಕಲ್ ಟೋಲ್‌ಗೇಟ್ ವಿಚಾರದಲ್ಲಿ ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಆರೋಪಿಸಿದ್ದಾರೆ. ಸುರತ್ಕಲ್ ಟೋಲ್ ಅನ್ನು ಹೆಜಮಾಡಿ ಟೋಲ್ ನೊಂದಿಗೆ ವಿಲೀನಗೊಳಿಸಲಾಗುವುದು. ಇದಾದ ನಂತರ, ನೀವು ಹೆಜಮಾಡಿಯಲ್ಲಿ ದುಪ್ಪಟ್ಟು ಮೊತ್ತವನ್ನು ಪಾವತಿಸಬೇಕು. ಸರ್ಕಾರವು ಜನರನ್ನು ಮೂರ್ಖರನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಜಮಾಡಿ ಟೋಲ್ ನಲ್ಲಿ ಎರಡು ಟೋಲ್ ಗಳ ಮೊತ್ತವನ್ನು ವಸೂಲಿ ಮಾಡಲಾಗುವುದು. ಆ ಮೂಲಕ ಹಗಲು ದರೋಡೆ ಮುಂದುವರಿಯಲಿದೆ. ಸುರತ್ಕಲ್ ನಲ್ಲಿ ಟೋಲ್ […]

ಪ್ರತಿಭಾ ಕುಳಾಯಿ ಘನತೆಗೆ ಧಕ್ಕೆ ತಂದವರ ವಿರುದ್ದ ಮಾನಹಾನಿ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಕಾರ್ಯಕರ್ತೆ ಮತ್ತು ಕಾಂಗ್ರೆಸ್ ಪಕ್ಷದ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ಬರೆದು ಅವರ ಘನತೆಗೆ ಧಕ್ಕೆ ತಂದ ವ್ಯಕ್ತಿಯ ಬಂಧನಕ್ಕೆ ಎರಡು ತಂಡ ರಚಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದ ಸಂದರ್ಭದಲ್ಲಿ ಪ್ರತಿಭಾ ಅವರ ವೀಡಿಯೋ ಚಿತ್ರಗಳನ್ನು ಸಂಕಲನ ಮಾಡಿ ಅದನ್ನು ಅಸಭ್ಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ […]

ಟ್ರೊಲ್ ಗೆ ಹೆದರುವ ಹೆಣ್ಣುಮಗಳು ನಾನಲ್ಲ; ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಪ್ರತಿಭಾ ಕುಳಾಯಿ 

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ, ಇದಕ್ಕೆಲ್ಲ ಹೆದರುವ ಹೆಣ್ಣು ಮಗಳು ನಾನಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಳ್ಳಲು ಶಕ್ತಿ ಸ್ಪೂರ್ತಿಯನ್ನು ತುಂಬುತ್ತದೆ. ನಿಮ್ಮ ಅಭಿಮಾನಕ್ಕೆ ಚಿರಋಣಿ ಎಂದು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಬಿಜೆಪಿ […]

ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ: ಪ್ರತಿಭಟನಾಕಾರರ ಬಂಧನ

ಸುರತ್ಕಲ್: ಅಕ್ಟೋಬರ್ 18 ರಂದು ಟೋಲ್ ಗೇಟ್ ವಿರೋಧಿ ಸಮಿತಿಯಿಂದ ಕರೆಯಲಾಗಿದ್ದ ಪ್ರತಿಭಟನೆಯ ಕಾವು ಜೋರಾಗಿದ್ದು, ಹಲವರ ಬಂಧನವಾಗಿದೆ. ಪ್ರತಿಭಟನಾಕಾರರು ಟೋಲ್ ಗೇಟ್ ಮುತ್ತಿಗೆ ತಡೆಯಲು ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ದಾಟಿ ಟೋಲ್ ಗೆ ಮುತ್ತಿಗೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ಮಿಥುನ್ ರೈ ಟೋಲ್ ಗೇಟ್ ಮೇಲೆ ಹತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಲು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪ್ರತಿಭಟನೆಯಲ್ಲಿ ನಿರತರಾಗಿದ್ದ ಮಾಜಿ ವಿಧಾನ್ ಪರಿಷತ್ ಸದಸ್ಯ ಐವನ್ ಡಿಸೋಜಾ, […]

ಸುರತ್ಕಲ್ ಟೋಲ್ ಗೇಟ್ ಶೀಘ್ರ ತೆರವು: ಮುತ್ತಿಗೆ ಕೈ ಬಿಡಲು ಮನವಿ

ಸುರತ್ಕಲ್: ಇಲ್ಲಿನ ಅಕ್ರಮ ಟೋಲ್ ಗೇಟ್ ಅನ್ನು ಇನ್ನೂ ತೆರವುಗೊಳಿಸದಿರುವುದನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳು ಅಕ್ಟೋಬರ್ 18ರಂದು ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಜಿಲ್ಲಾಡಳಿತದ ಪರವಾಗಿ ಪಣಂಬೂರು ಪೊಲೀಸ್ ಉಪ ಆಯುಕ್ತರ ಕಚೇರಿಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಮದನ್ ಮೋಹನ್, ಸುರತ್ಕಲ್ ಟೋಲ್ ಗೇಟ್ ತೆರವು ಪ್ರಕ್ರಿಯೆಯ ಆಡಳಿತಾತ್ಮಕ ಕೆಲಸಗಳು ನಡೆಯುತ್ತಿದ್ದು, ಶೀಘ್ರ […]