ಬಹುಮುಖ ಪ್ರತಿಭೆ ಮುದ್ದು ಮೂಡುಬೆಳ್ಳೆಯವರಿಗೆ ರಂಗ ಚಾವಡಿ 2022 ಪ್ರಶಸ್ತಿ
ಮಂಗಳೂರು: ಪ್ರತಿಷ್ಠಿತ ರಂಗ ಚಾವಡಿ 2022ರ ಪ್ರಶಸ್ತಿಗೆ ಸಾಹಿತಿ, ಜಾನಪದ ವಿದ್ವಾಂಸ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ನವಂಬರ್ 20 ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಇವರು ತನ್ನ16 ನೇ ವಯಸ್ಸಿನಿಂದ ಜಾನಪದ ಸಾಹಿತ್ಯದ ಕಡೆಗೆ ಆಕರ್ಷಿತರಾಗಿದ್ದಾರೆ. ಸರಕಾರದ ನ್ಯಾಯಾಂಗ ಹಾಗೂ ಪ್ರಸಾರ ಇಲಾಖೆಯಲ್ಲಿ ಹಾಗೂ ಆಕಾಶವಾಣಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಇವರು ಮಂಗಳೂರು ವಿಶ್ವವಿದ್ಯಾಲಯದ ಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿಯೂ […]
ಅಸಭ್ಯ ರೀತಿ ವೀಡೀಯೋ ಎಡಿಟ್ ಮಾಡಿದವರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಪ್ರತಿಭಾ ಕುಳಾಯಿ
ಮಂಗಳೂರು: ಅ.18 ರಂದು ಸಾಮಾಜಿಕ ಜಾಲತಾಣದಲ್ಲಿ ತನ್ನ ಅಸಹ್ಯ ಮತ್ತು ಅಸಭ್ಯ ರೀತಿಯಲ್ಲಿ ಚಿತ್ರಿಸಿದ ಭಾವಚಿತ್ರಕ್ಕೆ ಕಮೆಂಟ್ ಮಾಡಿ ಎಂದು ಹರಿಯಬಿಟ್ಟ ಕೆ.ಟಿ ಶೆಟ್ಟಿ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಂಗಳೂರು ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಅ18 ರಂದು ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನಾ ಸಂದರ್ಭದಲ್ಲಿ ಆರಕ್ಷಕ ಅಧಿಕಾರಿಗಳು ತಮ್ಮನ್ನು ಬಂಧಿಸಲು ಬಂದಿದ್ದು, ಆ ಸಂದರ್ಭದಲ್ಲಿ ಬಂಧನದ ವಿರುದ್ದ ಸಾರ್ವಜನಿಕವಾಗಿ ಪ್ರತಿಭಟಿಸಿದ್ದು, ಆಗ ಅಲ್ಲಿದ್ದ […]
ಸುರತ್ಕಲ್ ಜಂಕ್ಷನ್ ಗೆ ಸಾವರ್ಕರ್ ವೃತ್ತ ಎಂದು ನಾಮಕರಣ: ಮನಪಾ ಅನುಮೋದನೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಸುರತ್ಕಲ್‌ನಲ್ಲಿರುವ ಜಂಕ್ಷನ್‌ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಅನುಮೋದಿಸಿದೆ. ನೂತನ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು. ಮುಂದಿನ ಪಾಲಿಕೆ ಸಭೆಯಲ್ಲಿ ಸಭೆಯ ನಡಾವಳಿಗಳನ್ನು ಅಂಗೀಕರಿಸಲಾಗುವುದು ಮತ್ತು ನಂತರ, ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಜಂಕ್ಷನ್‌ಗೆ ಸಾವರ್ಕರ್ ಹೆಸರಿಡುವ ಕುರಿತು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದರು. […]
ಫಾಸಿಲ್ ನ ಹತ್ಯೆಗೆ ಬಳಸಲಾಗಿದ್ದ ಕಾರಿನೊಳಗೆ ಸಿಮ್ ಕಾರ್ಡ್, ರಕ್ತದ ಕಲೆಗಳು: ಹೆಚ್ಚಿನ ತನಿಖೆಗಾಗಿ ಆಗಮಿಸಲಿರುವ ವಿಧಿವಿಜ್ಞಾನ ತಂಡ
ಪಡುಬಿದ್ರೆ: ಸುರತ್ಕಲ್ ನ ಯುವಕ ಫಾಸಿಲ್ ನ ಹತ್ಯೆಗೆ ಬಳಸಲಾಗಿದ್ದ ಇಯಾನ್ ಕಾರು ಪಡುಬಿದ್ರೆ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ಕಾಜರಕಟ್ಟೆ ಅಶ್ವಥ ಕಟ್ಟೆಯ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದು, ಕಾರೊಳಗೆ ಮೈಕ್ರೋ ಸಿಮ್, ಹಿಂಬದಿಯ ಸೀಟಿನಲ್ಲಿ ರಕ್ತದ ಕಲೆಗಳು, ನೀರಿನ ಬಾಟಲಿ ಮತ್ತು ಸ್ವಲ್ಪ ಹಣ ಪತ್ತೆಯಾಗಿದೆ ಎಂದು ಹೊಸದಿಗಂತ ವರದಿ ಮಾಡಿದೆ. ಪಡುಬಿದ್ರೆ ಪೋಲಿಸರು ಕಾರಿಗೆ ಹೊದಿಕೆ ಮುಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯ ತಂಡವನ್ನು ಕಾಯಲಾಗುತ್ತಿದೆ.
ಫಾಜಿಲ್ ಹತ್ಯೆಗೆ ಬಳಸಿದ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆ
ಪಡುಬಿದ್ರೆ: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ ನೀಡಿದ್ದು, ಪೋಲಿಸರು ಸ್ಥಳಕ್ಕೆ ತೆರಳಿ ಕಾರನ್ನು ಗಮನಿಸಿದಾಗ ಫಾಜಿಲ್ ಹತ್ಯೆಗೆ ಬಳಸಿದ ಕಾರು ಎಂದು ತಿಳಿದು ಬಂದಿದೆ. ಆರೋಪಿಗಳು ಕಾರನ್ನು ಸುರತ್ಕಲ್ ನಿಂದ ಪಡುಬಿದ್ರೆಯ ಇನ್ನಾಕ್ಕೆ ಚಲಾಯಿಸಿಕೊಂಡು ಬಂದು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು […]