ಸುರತ್ಕಲ್: ಮೀನಿನ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಮಂಗಳೂರು: ಮೀನಿನ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಸುರತ್ಕಲ್ ತಡಂಬೈಲ್ ಬಳಿ ಇಂದು ಸಂಭವಿಸಿದೆ. ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಮೃತ ದುರ್ದೈವಿ. ಬೈಕ್ ಸವಾರ ರಸ್ತೆ ಕ್ರಾಸ್ ಮಾಡುವ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಸಾವರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.