ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಆಯ್ಕೆ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಅವರು ಆಯ್ಕೆಯಾಗಿದ್ದಾರೆ. ಇವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕುಯಿಲಾಡಿ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿವರ್ಹಿಸಿದ್ದಾರೆ. ಪ್ರಸ್ತುತ ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರೂ ಆಗಿದ್ದಾರೆ. ಉಡುಪಿ ಹಾಗೂ ಕಾಪು ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.