ಮೇ 25 ರಂದು ಉಡುಪಿ ಜಿಲ್ಲೆಯ ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮ
ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಐವರು ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ, ಕಿರಣ್ ಕುಮಾರ್ […]
ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಸಾವಿರಾರು ಅಭಿಮಾನಿಗಳು ಭಾಗಿ
ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಮೆರವಣಿಗೆ ನಡೆಸಿ, ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಲಾಲಾಜಿ ಆರ್. ಮೆಂಡನ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, […]
ಬಬ್ಬುಸ್ವಾಮಿ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ
ಉಡುಪಿ: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾದ ಗುರ್ಮೆ ಸುರೇಶ್ ಶೆಟ್ಟಿಯವರು ಶುಕ್ರವಾರದಂದು ಕೊಂಬಗುಡ್ಡೆ ಮಲ್ಲಾರ್,ಉಚ್ಚಿಲ, ಮುಳೂರ್, ಕಾಪು, ಉಳಿಯಾರಗೋಳಿ, ಕಟಪಾಡಿ ಪೇಟೆಬೆಟ್ಟು, ಗುಡ್ಡೆಯಂಗಡಿ, ಉದ್ಯಾವರ, ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.