ಶಾಲಾರಂಭದ ದಿನವೇ ಪಠ್ಯಪುಸ್ತಕ-ಸಮವಸ್ತ್ರ ವಿತರಣೆ: ಸುರೇಶ್ ಕುಮಾರ್
ಮಂಗಳೂರು: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ವಿಳಂಭವಾಗಿ ದೊರಕುವುದನ್ನು ತಪ್ಪಿಸಲು ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಸೈಕಲ್‍ಗಳನ್ನು ವಿತರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಅವರು ಸೋಮವಾರ ಬಂಟ್ವಾಳ ತಾಲೂಕಿನ ದಡ್ಡಲಕಾಡು ಗ್ರಾಮದಲ್ಲಿನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿದರು. ಪಠ್ಯಪುಸ್ತಕಗಳು ತಿಂಗಳುಗಳ ಕಾಲ ದೊರಕದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಇದಲ್ಲದೇ, ಸಮವಸ್ತ್ರ ಹಾಗೂ ಸೈಕಲ್ ವಿತರಣೆ ಕೂಡಾ […]