ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಪಠ್ಯದ ಹೊರೆ ಕಡಿಮೆಯಾಗಲಿದೆ ,ಸಚಿವರಿಂದ ಪ್ಲಾನ್

ಉಡುಪಿ ಜೂನ್ 9: ಕೋವಿಡ್-19 ಕಾರಣದಿಂದ ಈ ವರ್ಷದ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುವುದು ವಿಳಂಬವಾಗಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಸಕ್ತ ವರ್ಷದ ಶಾಲಾ ಪಠ್ಯವನ್ನು ಕಡಿಮೆ ಮಾಡಲು ಚಿಂತನೆ ಇದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಜಿಲ್ಲಾ  ಪಂಚಾಯತ್ ಸಭಾಂಗಣದಲ್ಲಿ , ಉಡುಪಿ, ಉತ್ತರ ಕನ್ನಡ ಮತ್ತು ದ.ಕನ್ನಡ ಜಿಲ್ಲೆಗಳ , ಜಿಲ್ಲಾ ಪಂಚಾಯತ್ ಸಿಇಓ ಗಳು, ಡಿಡಿಪಿಐ ಗಳು ಮತ್ತು ಬಿಇಓ ಗಳೊಂದಿಗೆ ಎಸ್.ಎಸ್.ಎಲ್.ಸಿ. […]