Sushmitha Sen | ಖ್ಯಾತ ನಟಿ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಹೃದಯಾಘಾತ

  ಹೊಸದಿಲ್ಲಿ: ನಟಿ ಹಾಗೂ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ (Sushmitha Sen) ತಮ್ಮ ಸಾಮಾಜಿಕ ತಾಣ ಖಾತೆಯಲ್ಲಿ ತಮ್ಮ ಆರೋಗ್ಯದ ಕುರಿತು ಆಘಾತಕಾರಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನುವುದನ್ನು ಅವರು ಬಹಿರಂಗಪಡಿಸಿದ್ದಾರೆ.