ಜಲ ಕ್ರೀಡೆಯ ಮೂಲಕ ಮತದಾನ ಜಾಗೃತಿ: ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ವತಿಯಿಂದ ಆಯೋಜನೆ

ಉಡುಪಿ: ಪ್ರತಿಯೊಬ್ಬ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಹೇಳಿದರು. ಅವರು ರವಿವಾರ ಮಲ್ಪೆಯ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ (SVEEP) ಉಡುಪಿ ಇವರ ವತಿಯಿಂದ ಆಯೋಜಿಸಲಾದ ಜಲ ಕ್ರೀಡೆಯ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿರ್ಣಾಯಕ ಪಾತ್ರ ಮತದಾರರ ಮೇಲಿದೆ. ಮೌಲ್ಯಯುತವಾದ ಇಂತಹ ಹೊಣೆಗಾರಿಕೆಯನ್ನುಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡುವ […]

ಮತದಾನ ಜಾಗೃತಿಗಾಗಿ ಪ್ರಜ್ಞಾವಂತರಿಗೊಂದು ಸವಾಲ್ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ: ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಸ್ವೀಪ್ ಸಮಿತಿಯ ಕಾರ್ಯಕ್ರಮಗಳ ಮಾಹಿತಿಗೆಂದೇ ರೂಪಿಸಿರುವ ಇ-ಪತ್ರಿಕೆಯಲ್ಲಿ , ಚುನಾವಣೆಯ ಬಗ್ಗೆ ನಿಮಗೆಷ್ಟು ತಿಳಿದಿದೆ ಎಂಬ ವಿಷಯದ ಬಗ್ಗೆ, ಪ್ರಜ್ಞಾವಂತರಿಗೊಂದು ಸವಾಲ್ ಎಂಬ ಕುತೂಹಲಕಾರಿ ಪಶ್ನೆಗಳನ್ನು ಒಳಗೊಂಡ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾವಹಿಸುವವರು ಪ್ರತಿದಿನ […]

ಮೇ 10…. ಮತ ಒತ್ತು… ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕರೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10… ಮತ ಒತ್ತು.. ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ರವಿವಾರ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ […]

ಮ್ಯಾಂಗ್ರೋವ್‌ ಕಾಡುಗಳ ಮಧ್ಯೆಯೂ ಮತದಾನ ಜಾಗೃತಿ: ಜಿಲ್ಲಾ ಸ್ವೀಪ್ ವತಿಯಿಂದ ವಿನೂತನ ಕಾರ್ಯ

ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್‌ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್‌ ಮೂಲಕ ತೆರಳಿ ಮ್ಯಾಂಗ್ರೋವ್‌ ಕಾಡುಗಳ ಮಧ್ಯೆ ಕಯಾಕ್‌ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ. ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಬುಧವಾರ, ಸಾಲಿಗ್ರಾಮದ ಕಯಾಕಿಂಗ್‌ ಪಾಯಿಂಟ್‌ ಬಳಿ , ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು , ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರು […]

ಅನಿವಾಸಿ ಭಾರತೀಯ ಮತದಾರರನ್ನು ಸೆಳೆಯಲು ಸ್ವೀಪ್ ನಿಂದ ವಿನೂತನ ಪ್ರಯತ್ನ

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು, ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ವಿದೇಶದಲ್ಲಿ ಮತ್ತು ಹೊರರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನ ಮಾಡುತ್ತಿದೆ. ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ವಿದೇಶಗಳಿಗೆ ಮತ್ತು ಹೊರರಾಜ್ಯಗಳಿಗೆ ತೆರಳಿದ್ದು, ಇಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. […]